Weather Mirror |16-10-2023 | ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |ಅ. 22 ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣ

October 16, 2023
2:22 PM
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಅಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಹಿಂಗಾರು ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕಾರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ರಾಮನಗರ, ಉಳಿದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಕ್ಷೀಣಿಸಿದ್ದು, ಅಕ್ಟೊಬರ್ 17ರಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಹಿಂಗಾರು ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

Karnataka Weather report :After October 21 or 22, there are indications that the rains will taper off across the state.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror