17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕಾರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ರಾಮನಗರ, ಉಳಿದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಕ್ಷೀಣಿಸಿದ್ದು, ಅಕ್ಟೊಬರ್ 17ರಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಹಿಂಗಾರು ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ…
ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು…
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಬರಾಜು ಮಾಡುವ ಅಗತ್ಯ ಔಷಧಿಗಳ ಪಟ್ಟಿಯನ್ನು 250 ರಿಂದ…
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.