19.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಸಂಜೆ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾದುದರಿಂದ ಹಿಂಗಾರು ತಟಸ್ಥಗೊಂಡಿದೆ. ಅರಬ್ಬಿ ಸಮುದ್ರ ವಾಯುಭಾರ ಕುಸಿತವು ಪಶ್ಚಿಮಕ್ಕೂ, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೂ ಚಲಿಸುವ ಸಾಧ್ಯತೆ ಇದೆ. ಒಕ್ಟೋಬರ್ 21ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.