21.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಪ್ರಸ್ತುತ ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನಷ್ಟು ಬಲಗೊಂಡು ಒಕ್ಟೊಬರ್ 24ರಂದು ಓಮನ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ಒಕ್ಟೊಬರ್ 24ರಂದು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.
*ಒಕ್ಟೊಬರ್ ಕೊನೇಯವರೆಗೂ ಹಿಂಗಾರು ಬಲಗೊಳ್ಳುವ ಸೂಚನೆಗಳು ಕಾಣುತ್ತಿಲ್ಲ.*
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…