29.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸಂಜೆ, ರಾತ್ರಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಜೋತೆಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಇರಬಹುದು.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು, ಕುದುರೆಮುಖ, ಶೃಂಗೇರಿ, ಕೊಪ್ಪ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರದ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತವು ಸಂಪೂರ್ಣ ಶಿಥಿಲಗೊಂಡಿದ್ದರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಮುಂದಿನ ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ.
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…