31.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಶಿವಮೊಗ್ಗ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಬೆಳಗಾವಿ – ಉತ್ತರ ಕನ್ನಡ – ಗೋವಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು). ಹಾವೇರಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗಗಳಲ್ಲಿ ಹಿಂಗಾರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನ ಮುನ್ಸೂಚನೆಯಂತೆ ನ.6ರಿಂದ ಅಂದರೆ ಸ್ವಾತಿ ನಕ್ಷತ್ರ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಾದ್ಯಂತ ಮಳೆ ಕ್ಷೀಣಿಸಿ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…