ವೆದರ್‌ ಮಿರರ್‌ | 02.11.2023 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ನ.3 ರಿಂದ ಕರಾವಳಿ ಭಾಗದಲ್ಲಿ ಚುರುಕಾಗುವ ಮಳೆ |

November 2, 2023
1:43 PM

03.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕಾರ್ಕಳ ಸುತ್ತಮುತ್ತ ಸಹ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ನ.3 ರಿಂದ ಮತ್ತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ. ನ.9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror