03.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕಾರ್ಕಳ ಸುತ್ತಮುತ್ತ ಸಹ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ನ.3 ರಿಂದ ಮತ್ತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ. ನ.9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…
ದೇಶದ ವಿವಿದೆಡೆ ಮಾರ್ಚ್ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…
ಹೋರ್ಮುಜ್ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…