04.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೋಡ ಹಾಗೂ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಹಾಗೂ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನ. 9ರ ತನಕ ಮುಂದುವರಿಯುವ ಸಾಧ್ಯತೆ ಇದೆ. ನ. 7 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…