09.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆ ಉಂಟಾಗಿದ್ದು, ಇದು ಪಶ್ಚಿಮಕ್ಕೆ ಚಲಿಸುತ್ತಿದ್ದಂತಯೇ ಈಗಿನ ಹಿಂಗಾರು ಮಳೆಯ ವಾತಾವರಣವು ಕ್ಷೀಣಿಸುವ ಲಕ್ಷಣಗಳಿವೆ. ನ. 10ರ ನಂತರ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಈಗಿನ ಮುನ್ಸೂಚನೆಯಂತೆ ನ. 16ರಿಂದ ದಕ್ಷಿಣ ಒಳನಾಡು. ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ, ಪರಿಸ್ಥಿತಿ ಬದಲಾಗಬಹುದು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…