19.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಮಾನ್ಯ ಗುಡುಗು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ( ನಿನ್ನೆ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಗುಡುಗು ಸಹಿತ ಮಳೆಯಾಗಿದೆ .)
ಕೊಡಗು, ಸೋಮವಾರಪೇಟೆ, ಕುದುರೆಮುಖ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಕ್ಷೀಣಿಸಿರುವುದರಿಂದ ನ. 19ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…