Advertisement
ವೆದರ್ ಮಿರರ್

ವೆದರ್‌ ಮಿರರ್‌ | 21.11.2023 | ರಾಜ್ಯದ ಕೆಲವು ಕಡೆ ಮೋಡದ ವಾತಾವರಣ, ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ |

Share

22.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಹಾಸನ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಮೈಸೂರು ಒಂದೆರಡು ಕಡೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕು ಹಾಗೂ ಕಾರಣ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನ. 23 ಹಾಗೂ 24 ರಂದು ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನ.29 ಅಥವಾ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ. 25 ಹಾಗೂ 26ರಂದು ಮಹಾರಾಷ್ಟ್ರ ದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

12 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

12 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

12 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

16 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago