ವೆದರ್‌ ಮಿರರ್‌ | 24.11.2023 | ರಾಜ್ಯದ ಹಲವೆಡೆ ಮೋಡದ ವಾತಾವರಣ, ಅಲ್ಲಲ್ಲಿ ಮಳೆ ಸಾಧ್ಯತೆ|

November 24, 2023
11:13 AM

25.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ.

ಒಟ್ಟಿನಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ, ಮಳೆಯ ವಾತಾವರಣ ಇದೆ. ನ. 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ನ. 30ರ ತನಕವೂ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror