ವೆದರ್‌ ಮಿರರ್‌ | 03.12.2023 | ಘಟ್ಟದ ತಪ್ಪಲು ಪ್ರದೇಶದಲ್ಲಿ ತುಂತುರು ಮಳೆ ಸಾಧ್ಯತೆ | ಆಂಧ್ರಾ ಕರಾವಳಿಯಲ್ಲಿ ಮಳೆ ಸಾಧ್ಯತೆ |

December 3, 2023
11:34 AM

04.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ, ಕುದುರೆಮುಖ, ಶೃಂಗೇರಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರದ ಮಲೈಮಾದೇಶ್ವರ ಬೆಟ್ಟದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಚಂಡಮಾರುತವು ಡಿ.4ರ ರಾತ್ರಿ ಅಥವಾ 5ರಂದು ಆಂದ್ರಾದ ನೆಲ್ಲೂರು ಹಾಗೂ ಓಂಗಲ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror