16.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಅದು ನಾಳೆ ಶ್ರೀಲಂಕಾ ಮೂಲಕ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಈಗಿನ ಮುನ್ಸೂಚನೆಯಂತೆ ಡಿ. 16ರಂದು ದಕ್ಷಿಣ ತಮಿಳುನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಡಿ. 17ರಂದು ತಮಿಳುನಾಡಿನಾದ್ಯಂತ ಹಾಗೂ ರಾಜ್ಯದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ತುಮಕೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಡಿ. 16ರಂದು ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.