19.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಅಲ್ಲಲ್ಲಿ ಹಾಗೂ ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ಬೆಳ್ತಂಗಡಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಿಂದ ದಾಟಿ ಅರಬ್ಬಿ ಸಮುದ್ರದ ಕಡೆಗೆ ಸಾಗಿದ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿರುವುದರಿಂದ ಈಗಿನ ಮೋಡದ ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…