ವೆದರ್‌ ಮಿರರ್‌ | 29.12.2023 | ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣದ ಮುನ್ಸೂಚನೆ

December 29, 2023
12:28 PM

30.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜ. 1 ಅಥವಾ 2ರಂದು ಅರಬ್ಬಿ ಸಮುದ್ರದ ಭೂಮಧ್ಯ ರೇಖೆಯ ಬಳಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ . ಜ.6ರ ವೇಳೆಗೆ ಉತ್ತರ ಕರ್ನಾಟಕ, ಮಹಾರಾಷ್ಟ್ರ ಕರಾವಳಿಗೆ ತಲಪುವ ಸಾಧ್ಯತೆ ಇದೆ. (ಇದು ಈಗಿನ ಸ್ಥಿತಿಯಲ್ಲಿ ಸಾಧ್ಯತೆ ಮಾತ್ರ. ಬದಲಾಗಬಹುದು). ಜ.4ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror