30.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜ. 1 ಅಥವಾ 2ರಂದು ಅರಬ್ಬಿ ಸಮುದ್ರದ ಭೂಮಧ್ಯ ರೇಖೆಯ ಬಳಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ . ಜ.6ರ ವೇಳೆಗೆ ಉತ್ತರ ಕರ್ನಾಟಕ, ಮಹಾರಾಷ್ಟ್ರ ಕರಾವಳಿಗೆ ತಲಪುವ ಸಾಧ್ಯತೆ ಇದೆ. (ಇದು ಈಗಿನ ಸ್ಥಿತಿಯಲ್ಲಿ ಸಾಧ್ಯತೆ ಮಾತ್ರ. ಬದಲಾಗಬಹುದು). ಜ.4ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…
ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…
ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…
ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…
ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…