31.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಮತ್ತು ಕರಾವಳಿ ತೀರ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಜ. 1 ಅಥವಾ 2ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜ. 7ರ ಅಂದಾಜು ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲುಪುವ ಸಾಧ್ಯತೆ ಇದೆ.
ಜನವರಿ 3ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ವಾಯುಭಾರ ಕುಸಿತದ ಪ್ರಭಾವ ಆರಂಭವಾಗಿ 5ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ. ವಾಯುಭಾರ ಕುಸಿತದ ಪಥ ಬದಲಾದಂತೆ ಪರಿಣಾಮವೂ ಬದಲಾಗಬಹುದು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…