06.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಸುಳ್ಯ ಸುತ್ತಮುತ್ತ ಒಂದೆರಡು ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಮಳೆಯ ವಾತಾವರಣವು ಜ. 9ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…