ವೆದರ್‌ ಮಿರರ್‌ | 23.04.2024 | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

March 23, 2024
11:32 AM

24.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು, ಮಾ. 28ರಿಂದ ಮತ್ತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಾ. 31 ಅಥವಾ ಎ. 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror