Advertisement
ವೆದರ್ ಮಿರರ್

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

Share

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚೆನೆಯಂತೆ ಇವತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ ಮೇ 4 ಹಾಗೂ 5 ರಂದು ಮೋಡ ಮಾತ್ರ ಇರಬಹುದು. ಮೇ 6ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

7 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

7 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

7 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

8 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

23 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago