ವೆದರ್‌ ಮಿರರ್‌ | 22.05.2024 | ಇಂದೂ ರಾಜ್ಯದೆಲ್ಲೆಡೆ ಉತ್ತಮ ಮಳೆ ಮುನ್ಸೂಚನೆ | ಮೇ 25ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ.

May 22, 2024
3:55 PM

23.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣದ ಮಂಗಳೂರು ಹಾಗೂ ಕೇರಳ ಗಡಿಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು ಉತ್ತಮ (ಸೋಮವಾರಪೇಟೆ ಸಾಮಾನ್ಯ ಇರಬಹುದು) ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮೇ 23ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಕ್ಕೆ ಚಲಿಸಿ ಮೇ 26 ಅಥವಾ 27ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

ಈಗಿನಂತೆ ಮೇ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror