24.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಉಡುಪಿ ಕರಾವಳಿ ತೀರ ಭಾಗಗಳಲ್ಲಿ, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಧರ್ಮಸ್ಥಳ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು ( ಸೋಮವಾರಪೇಟೆ ಸಹಿತ) ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕುಂಠಿತವಾಗುವ ಲಕ್ಷಣಗಳಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯಲ್ಲಿ ” ರೇಮಲ್ “ ಚಂಡಮಾರುತ ರೂಪುಗೊಳ್ಳುತ್ತಲಿದ್ದು, ಇದರ ತೀವ್ರತೆಯ ಮೇಲೆ ಮುಂಗಾರು ಮುಂದುವರಿಯುವಿಕೆ ಅವಲಂಬಿಸಿದೆ. ಈಗಿನ ಪ್ರಕಾರ ಮೇ 26ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಮೇ 26 ಹಾಗೂ 27ರಂದು ಬಾಂಗ್ಲಾದೇಶ ಹಾಗೂ ಭಾರತದ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಅನಾಹುತ ಸೃಷ್ಠಿಸುವ ಸಾಧ್ಯತೆ ಇದೆ.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490