31.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಸ್ವಲ್ಪ ಜಾಸ್ತಿಯೇ ಇರಬಹುದು. ಉಡುಪಿ ಒಂದೆರಡು ಕಡೆ ( ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿ ತೀರ ಭಾಗಗಳಲ್ಲಿ) ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 1ರಿಂದ ರಾಜ್ಯಕ್ಕೆ ಮುಂಗಾರು ಆಗಮನ ನಿರೀಕ್ಷೆ ಇದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಜೂನ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಆದರೆ ಮುಂಗಾರು ಆರಂಭ ದುರ್ಬಲವಾಗಿರಲಿದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…