03.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಾವಣಗೆರೆ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಮುಂಗಾರು ದುರ್ಬಲಗೊಂಡಿದ್ದು, ಮೇ 5ರಂದು ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮೇ 6ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…