18.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಜಾಸ್ತಿ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿಯ ಒಂದೆರಡು ಕಡೆ, ಚಾಮರಾಜನಗರದ ಒಂದೆರಡು ಕಡೆ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅಧಿಕ ತಾಪಮಾನದ ಕಾರಣದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಗುಡುಗು ಮಳೆಯ ಸಾಧ್ಯತೆಯೂ ಇದೆ.
ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಯು ಸಾಮಾನ್ಯವಾಗಿದ್ದರೆ, ತೀರ ಭಾಗಕ್ಕೆ ಬರುತ್ತಿದ್ದಂತೆ ದುರ್ಬಲಗೊಳ್ಳುತ್ತಿದೆ. ಈಗಿನಂತೆ ಜೂ. 20ರ ತನಕವೂ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಜೂ. 21ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ.