Advertisement
ವೆದರ್ ಮಿರರ್

ಹವಾಮಾನ ವರದಿ | 27.06.2024 | ರಾಜ್ಯದ ಹಲವೆಡೆ ಉತ್ತಮ ಮಳೆ ಮುನ್ಸೂಚನೆ

Share

28.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮತ್ತು ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಲಕ್ಷಣಗಳಿದ್ದರೂ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಜೂ. 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಈಗ ರಾಜ್ಯದ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುತ್ತಿದ್ದು, ಜುಲೈ 1 ಅಥವಾ 2 ರಿಂದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೂ ಪರಿಸ್ಥಿತಿ ಬದಲಾಗಬಹುದು. ಕಾದು ನೋಡಬೇಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago