29.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ . ಧಾರವಾಡ, ಬೆಳಗಾವಿ ಚಿಕ್ಕೋಡಿ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಇವತ್ತಿನಿಂದ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಕುಂಠಿತವಾಗಲಿದ್ದು, ಉತ್ತರ ಭಾರತದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಭಾರತದ ಅಧಿಕ ಉಷ್ಣಾಂಶ ಸಾಮಾನ್ಯ ಸ್ಥಿತಿಗೆ ಬಂದರೆ, ಅಂದರೆ ಜು.5 ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಆದರೆ ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆ ಕಡಿಮೆ. ದಿನದಲ್ಲಿ 2, 3 ಮಳೆಯ ಸಾಧ್ಯತೆ ಇದೆ.