ಹವಾಮಾನ ವರದಿ| 2.06.2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಜು.4 ರಿಂದ ಉತ್ತಮ ಮಳೆ ಮುನ್ಸೂಚನೆ

June 29, 2024
2:19 PM
30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜು.4ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ಜೂ. 30 ಹಾಗೂ ಜು. 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಜು. 2 ರಿಂದ 4ರ ತನಕ ಕರಾವಳಿ ಭಾಗಗಳನ್ನು ಹೊರತು ಪಡಿಸಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಜು. 5 ಅಥವಾ 6ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror