03.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಜು. 5ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿಯೂ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಜು.10ರಿಂದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.