Advertisement
ವೆದರ್ ಮಿರರ್

ಹವಾಮಾನ ವರದಿ | 09.07.2024 | ರಾಜ್ಯದೆಲ್ಲೆಡೆ ಸಾಮಾನ್ಯ ಮಳೆ | ಜು.11ರ ನಂತರ ಮಳೆ ಚುರುಕಾಗುವ ಸಾಧ್ಯತೆ |

Share
10.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯಕ್ಕಿಂತ ಸ್ವಲ್ಪ ಜಾಸ್ತಿ ಮಳೆಯಾಗುವ ಮುನ್ಸೂಚನೆ ಇದ್ದರೂ ತೀವ್ರತೆ ಕಡಿಮೆ ಇರಬಹುದು.
ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೋಲಾರ ಒಂದೆರಡು ಕಡೆ, ತುಮಕೂರು (ಪಾವಗಢ ಸೇರಿದಂತೆ) ಒಂದೆರಡು ಕಡೆ, ಚಿತ್ರದುರ್ಗ, ವಿಜಯಪುರ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 12ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.
ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ, ಮಲೆನಾಡು ಭಾಗಗಳಲ್ಲಿ ಕಾಪಿ ತೋಟಗಳಿಗೆ ಔಷಧಿ ಸಿಂಪಡಿಸಲು ಇವತ್ತು ಹಾಗೂ ಜುಲೈ 11ರ ತನಕ ಸ್ವಲ್ಪ ಅವಕಾಶ ಸಿಗಬಹುದು. ಮಧ್ಯಾಹ್ನ ನಂತರ ಅವಕಾಶ ಕಡಿಮೆಯಾಗಬಹುದು. ಮಳೆ ಸಂಪೂರ್ಣ ಬಿಟ್ಟು ಸಿಗುವ ಸಾಧ್ಯತೆ ಕಡಿಮೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 hour ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago