ಹವಾಮಾನ ವರದಿ | 10.07.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ | ಜು. 12ರಿಂದ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ

July 10, 2024
12:08 PM

11.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತೀರ ಭಾಗಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜುಲೈ 12ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಒಳನಾಡು ಭಾಗಗಳಲ್ಲಿ ಜುಲೈ 13ರಿಂದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮುಂದಿನ 10 ದಿನಗಳವರೆಗೂ ಅಂದರೆ ಜುಲೈ 19ರ ವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ದ್ರುವ ಕಡೆಯಿಂದ ಬರುತ್ತಿರುವ ಮಾರುತಗಳು ಸಂಪೂರ್ಣ ದುರ್ಬಲಗೊಂಡು ಜುಲೈ 12ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror