ಹವಾಮಾನ ವರದಿ | 17.07.2024 | ಕರಾವಳಿ ಜಿಲ್ಲೆಗಳಾದ್ಯಂತ ಮಳೆ | ಜು.20ರಿಂದ ಕೇರಳದಲ್ಲಿ ಮುಂಗಾರು ದುರ್ಬಲ ಸಾಧ್ಯತೆ

July 17, 2024
12:17 PM

18.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಪ್ರಕರಣಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

ಚಾಮರಾಜನಗರ, ಕೋಲಾರ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ವಿಜಯಪುರ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಜುಲೈ 20ರಿಂದ ಕೇರಳದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿರುವುದರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror