22.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಘಟ್ಟದ ಕೆಳಗಿನ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. ಮಧ್ಯಾಹ್ನ ನಂತರ ಮಳೆಯ ಪ್ರಮಾಣ ಕಡಿಮೆಯಾಗಬಹುದು.
ಕೊಡಗು, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮತ್ತು ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಜಾಸ್ತಿ ಇರಬಹುದು.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 23ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ದಿನದಲ್ಲಿ ಎರಡು, ಮೂರು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.