23.07.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ದಿನದಲ್ಲಿ ಅಲ್ಲಲ್ಲಿ 2,3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು).
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜು. 26ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇಲ್ಲ.
ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಲಿದ್ದು, ಆ ಭಾಗದಿಂದ ಹರಿದು ಬರುತ್ತಿರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.