23.07.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ದಿನದಲ್ಲಿ ಅಲ್ಲಲ್ಲಿ 2,3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು).
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜು. 26ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇಲ್ಲ.
ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಲಿದ್ದು, ಆ ಭಾಗದಿಂದ ಹರಿದು ಬರುತ್ತಿರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.ಸುಳ್ಯ ತಾಲೂಕು ಪಂಚಾಯತ್ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು…
ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು,…
ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…