24.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ, ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸುತ್ತಿರುವುದರಿಂದ (ಆಗ್ನೇಯ ಕಡೆಗೇ ಹೆಚ್ಚಿದೆ) ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಕೊಡಗು ಅಲ್ಲಲ್ಲಿ ಉತ್ತಮ (ಉತ್ತರ ಭಾಗ) ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜುಲೈ 26ರಿಂದ ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಗಾಳಿಯ ಒತ್ತಡ ಹಾಗೂ ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸುತ್ತಿರುವುದರಿಂದ ( ಆಗ್ನೇಯ ಕಡೆಗೇ ಹೆಚ್ಚಿದೆ) ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಮುನ್ಸೂಚನೆಗಿಂತ ಅಧಿಕ ಮಳೆಯಾಗುತ್ತಿದೆ.