24.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ, ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸುತ್ತಿರುವುದರಿಂದ (ಆಗ್ನೇಯ ಕಡೆಗೇ ಹೆಚ್ಚಿದೆ) ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಕೊಡಗು ಅಲ್ಲಲ್ಲಿ ಉತ್ತಮ (ಉತ್ತರ ಭಾಗ) ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜುಲೈ 26ರಿಂದ ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಗಾಳಿಯ ಒತ್ತಡ ಹಾಗೂ ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸುತ್ತಿರುವುದರಿಂದ ( ಆಗ್ನೇಯ ಕಡೆಗೇ ಹೆಚ್ಚಿದೆ) ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಮುನ್ಸೂಚನೆಗಿಂತ ಅಧಿಕ ಮಳೆಯಾಗುತ್ತಿದೆ.ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿ ವಿನಿಮಯಕ್ಕೆ ಹೊಸ ಅವಕಾಶಗಳನ್ನು ನೀಡಿದರೂ, ಅದರ…
ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಕಲ್ಯಾಣ…
ಕಳೆದ 12 ವರ್ಷಗಳಲ್ಲಿ 1,700ಕ್ಕೂ ಹೆಚ್ಚು ಹಳೆಯ ಹಾಗೂ ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ…
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಹಿಂಗಾರು ಬಿತ್ತನೆ ಚಟುವಟಿಕೆಗಳು…
ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ವೇಳಾಪಟ್ಟಿ ಡಿಸೆಂಬರ್ ಎರಡನೇ…
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರು…