ಹವಾಮಾನ ವರದಿ | 24.07.2024 | ರಾಜ್ಯದ ಅಲ್ಲಲ್ಲಿ ಮಳೆ | ಕರಾವಳಿಯಲ್ಲಿ ಜು.30ರವರೆಗೆ ಮಳೆ ಸಾಧ್ಯತೆ

July 24, 2024
12:30 PM

25.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗಾಳಿಯೊಂದಿಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಗಾಳಿಯೊಂದಿಗೆ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ( ಚಿಕ್ಕೋಡಿ ಸಹಿತ), ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಜು. 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮತ್ತೂ ಎರಡರಿಂದ ಮೂರು ದಿನಗಳ ಕಾಲ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror