ಹವಾಮಾನ ವರದಿ| 31.07.2024 | ರಾಜ್ಯದ ಹಲವೆಡೆ ಇಂದು ಸಾಮಾನ್ಯ ಮಳೆ ಮುನ್ಸೂಚನೆ| ಆ.2ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ| |

July 31, 2024
12:31 PM
01.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
 ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಲೆನಾಡು ಭಾಗಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಶೃಂಗೇರಿ, ಕುದುರೆಮುಖ, ಮೂಡಿಗೆರೆ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿಯೂ ಮಳೆ ಸ್ವಲ್ಪ ಜಾಸ್ತಿ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ದಾವಣಗೆರೆ, ಹಾವೇರಿ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಇವತ್ತಿನಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನಿನ್ನೆಯ ಮಳೆಯ ಅನಿರೀಕ್ಷಿತವಾಗಿತ್ತು. ಅಗಾಧ ಪ್ರಮಾಣದ ಮೋಡ ಹಾಗೂ ಅತಿ ಭಾರಿ ಮಳೆಗೆ ಬೇರೆಯದೇ ವೈಜ್ಞಾನಿಕ ಕಾರಣಗಳಿರಬಹುದು. ಸಾಮಾನ್ಯ ಮುಂಗಾರು ಆಗಿರಲಾರದು.
ಈಗಿನಂತೆ ಆ.2ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆ. 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಹಿತ ಇರಬಹುದು).
 ಮುಂಗಾರು ದುರ್ಬಲಗೊಳ್ಳತ್ತಿದೆಯೇ? ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರ ಗಮನಿಸುವಾಗ ಈ ಪ್ರಶ್ನೆ ಉದ್ಭವಿಸುತ್ತಿದೆ. ಮಾರುತಗಳು ಮಂದವಾಗಿ ದುರ್ಬಲಗೊಂಡಂತೆ ಗೋಚರಿಸುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror