04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ರಾಮನಗರ, ಬೆಂಗಳೂರು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ, ದಾವಣಗೆರೆ, ಹಾವೇರಿ, ವಿಜಾಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಿಹಾರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದರ ಪರಿಣಾಮವಾಗಿ ಆಗಸ್ಟ್ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈಗಿನಂತೆ ಆ. 6ರಿಂದ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…