04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಮಧ್ಯ ಬಿಡುವಿನ ಹೊತ್ತು ಹೆಚ್ಚಿರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಮಳೆ ಜಾಸ್ತಿ ಇರಬಹುದು.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆ.6ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ, ಆ. 8ರಿಂದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಆ.4ರಿಂದ ಅಲ್ಲಲ್ಲಿ ಉತ್ತಮ ಮತ್ತು ಜು. 6ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement