06.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಮತ್ತು ಕಾಸರಗೋಡು ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. ಗಾಳಿ ಹಾಗೂ ಅಲ್ಲಲ್ಲಿ ಗುಡುಗು ಸಾಧ್ಯತೆ ಇದೆ. (ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆಯಾದ್ದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ).
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು. ಹಾಸನ ಪೂರ್ವ ಭಾಗಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ರಾಮನಗರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಇದರ ಪ್ರಭಾವದಿಂದ ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ದುರ್ಬಲಗೊಂಡಿದೆ. ತಮಿಳುನಾಡಿನಲ್ಲಿ ಈಗ ಆಗುತ್ತಿರುವ ಮಳೆಯ ಪ್ರಭಾವದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆ. 6ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…