10.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ). ಉತ್ತರ ಕನ್ನಡ ಬೆಳಿಗ್ಗೆಯಿಂದ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಮೋಡದ ವಾತಾವರಣದ ಮುನ್ಸೂಚನೆಯೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಮೈಸೂರು, ಚಾಮರಾಜನಗರ (ಅಲ್ಲಲ್ಲಿ ಸಾಮಾನ್ಯ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು, ಆಗಸ್ಟ್ 16ರ ವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಕೊರತೆ ಉಂಟಾಗುವ ಲಕ್ಷಣಗಳಿವೆ.
ಕರಾವಳಿಯಲ್ಲಿ ಆಗಸ್ಟ್ 12ರ ತನಕ ಹೆಚ್ಚಾಗಿ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಅದೂ ಕಡಿಮೆಯಾಗಬಹುದು. ಮುಂಗಾರು ಇನ್ನು ಸಧ್ಯಕ್ಕೆ ಚೇತರಿಕೆಯ ಲಕ್ಷಣಗಳಿಲ್ಲ.
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…