11.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿಯೂ ಸಂಜೆಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…