Advertisement
ವೆದರ್ ಮಿರರ್

ಹವಾಮಾನ ವರದಿ | 12.08.2024 | ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Share

13.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಸುತ್ತಮುತ್ತ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗದ ಆಗುಂಬೆ ಸುತ್ತಮುತ್ತ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಪಾವಗಢ ಸಹಿತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಆಂದ್ರಾ ಗಡಿಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಕರಾವಳಿ ಭಾಗಗಳಲ್ಲಿ ಆ.16ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, 17ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಕೊಡಗು, ಹಾಸನ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಶ್ರೀಲಂಕಾ ಪಶ್ಚಿಮ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಪರಿಣಾಮ ಕಾದು ನೋಡಬೇಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago