17.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಬೆಂಗಳೂರು ದಕ್ಷಿಣ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ (ಚಿಕ್ಕೋಡಿ ಸಹಿತ), ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆ. 17ರಿಂದ ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಬಂಗ್ಲಾದೇಶ ಕರಾವಳಿಯಲ್ಲಿ ಹಾಗೂ ತಮಿಳುನಾಡಿನ ತುತುಕುಡಿ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಆ.17,18ರಂದು ಸ್ಪಷ್ಟತೆ ಸಿಗಬಹುದು. ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಕರ್ನಾಟಕದ – ವಿಭಜಿತ ಆಂದ್ರಾ ಗಡಿ ಭಾಗಗಳಲ್ಲಿ ಸಂಧಿಸುತ್ತಿರುವುದರಿಂದ ಆ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಮುಂಗಾರು ದುರ್ಬಲತೆ ಮುಂದುವರಿಯಲಿದೆ.ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…