Advertisement
ಸುದ್ದಿಗಳು

ಹವಾಮಾನ ವರದಿ | 16.08.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ

Share

17.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಬೆಂಗಳೂರು ದಕ್ಷಿಣ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ (ಚಿಕ್ಕೋಡಿ ಸಹಿತ), ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆ. 17ರಿಂದ ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಬಂಗ್ಲಾದೇಶ ಕರಾವಳಿಯಲ್ಲಿ ಹಾಗೂ ತಮಿಳುನಾಡಿನ ತುತುಕುಡಿ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಆ.17,18ರಂದು ಸ್ಪಷ್ಟತೆ ಸಿಗಬಹುದು.
ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಕರ್ನಾಟಕದ – ವಿಭಜಿತ ಆಂದ್ರಾ ಗಡಿ ಭಾಗಗಳಲ್ಲಿ ಸಂಧಿಸುತ್ತಿರುವುದರಿಂದ ಆ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಮುಂಗಾರು ದುರ್ಬಲತೆ ಮುಂದುವರಿಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago