19.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇದ್ದು, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಇವತ್ತು ರಾಜ್ಯದಾದ್ಯಂತ ಮೋಡದ ವಾತಾವರಣ ಇರಲಿದ್ದು, ಚಿತ್ರದುರ್ಗದಿಂದ ಬೆಳಗಾವಿ ತನಕ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸುವ ಪ್ರದೇಶವಾದ್ಧರಿಂದ ಉತ್ತರ ಒಳನಾಡು ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಮೋಡ ಮಾತ್ರ ಇರಬಹುದು. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ, ಆ. 21ರಂದು ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…